ಶುಲ್ಕ ರಹಿತವಾಗಿ ಆಧಾರ್ ಕಾರ್ಡ್ ನವೀಕರಣಕ್ಕೆ ಇನ್ನು ಮೂರು ದಿನ ಮಾತ್ರ ಅವಕಾಶ. ಡಿಸೆಂಬರ್ 14ರವರೆಗೆ ಉಚಿತ ಅಪ್ಡೇಟ್ಗೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಅವಕಾಶ ಕಲ್ಪಿಸಿದೆ. ಈ ವರೆಗೆ ಆನ್ಲೈನ್ ಆಧಾರ್ ನವೀಕರಣಕ್ಕೆ ರೂ. 50ರ ಸಾಮಾನ್ಯ ಶುಲ್ಕವನ್ನು ನಿಗದಿ ಪಡಿಸಲಾಗಿತ್ತು.ಈ ಅವಧಿಯಲ್ಲಿ ಆಧಾರ್ ಕಾರ್ಡ್ ನಲ್ಲಿ ತಪ್ಪಾಗಿ ನಮೂದಾಗಿರುವ ಹೆಸರು, ವಿಳಾಸ, ಜನ್ಮ ದಿನಾಂಕ, ಲಿಂಗ, ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಮುಂತಾದ ವಿವರಗಳನ್ನು ಸರಿಪಡಿಸಿ ನವೀಕರಿಸಬಹುದು.