ಕಲಬುರ್ಗಿ: ಜಿಲ್ಲೆಯಾದ್ಯಂತ ಕಳೆದ ಮಧ್ಯಾಹ್ನದಿಂದ ನಿರಂತರವಾಗಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದೆ. ಚಿತ್ತಾಪುರ ತಾಲೂಕಿನ ತೊನಸನಳ್ಳಿ(ಟಿ) ಗ್ರಾಮದಲ್ಲಿ ಸಿಡಿಲು ಬಡಿತಕ್ಕೆ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.ಗ್ರಾಮದ ಬಸಮ್ಮ ಸಂಗಾವಿ(45) ಹಾಗೂ ಅಂಬಿಕಾ ಸರಡಗಿ(43) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದು, ಈ ಪೈಕಿ ಆಂಜನಮ್ಮ ಗಂಭೀರವಾಗಿ ಗಾಯಗೊಂಡಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.ಸುಮಾರು ಏಳರಿಂದ ಎಂಟು ಜನರಿದ್ದ ತಂಡ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮಳೆ ಸುರಿದಿದೆ. ಮಳೆಯಿಂದ ರಕ್ಷಿಣೆಗಾಗಿ