ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ರೀಮಂತ ಮತ್ತು ಬಡವರಿಗಾಗಿ ಎರಡು ಪ್ರತ್ಯೇಕ ಭಾರತವನ್ನು ನಿರ್ಮಾಣ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೇಶದ ಸಂಪದ್ಭರಿತ ಸಂಪನ್ಮೂಲವನ್ನು ಕೆಲವೇ ಕೆಲವು ಶ್ರೀಮಂತ ಜನರ ಕೈಗಿಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಪಡೆಯಬೇಕಾದ ಏಕೈಕ ರಾಜ್ಯವೆಂದರೆ ಗುಜರಾತ್. ಇಲ್ಲಿ ಪ್ರತಿಭಟನೆ ನಡೆಸಿದ ಜಿಗ್ನೇಶ್ ಮೆವಾನಿ ಅವರನ್ನು ಮೂರು ತಿಂಗಳ ಕಾಲ ಜೈಲಿನಲ್ಲಿಡಲಾಗಿದೆ. ನಾನು ಹೇಳುತ್ತಿದ್ದೇನೆ, ಮೆವಾನಿ ಅವರನ್ನು