ಎರಡು ಕಡೆ ಹೆಜ್ಜೇನು ದಾಳಿ ನಡೆಸಿರುವ ಪ್ರಕರಣ ವರದಿಯಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಲಂಕೇನಹಳ್ಳಿ ಗ್ರಾಮದ ಹನುಮಂತರಾಯಪ್ಪ(70) ಮತ್ತು ಗಂಗಮ್ಮ(75) ಗಾಯಗೊಂಡಿದ್ದಾರೆ.ತುಮಕೂರು ಜಿಲ್ಲಾ ಆಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಗಂಗಮ್ಮನಿಗೆ ಕೊರಟಗೆರೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಹೆಜ್ಜೇನು ದಾಳಿ ಪ್ರಕರಣಗಳು ಮರುಕಳಿಸುತ್ತಿದ್ದು ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.