ಮಂಗಳೂರಿನ ಉರ್ವ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆ ನಡೆಸಿದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದು, ಬಂಧಿತರನ್ನು ನೊವೆಲ್ ಸಿಕ್ವೇರಾ, ಜಾನ್ ಸಿಕ್ವೇರಾ ಎಂದು ಗುರುತಿಸಲಾಗಿದೆ. ಹೆಡ್ಕಾನ್ಸ್ಟೇಬಲ್ ನಾರಾಯಣ, ಕಾನ್ಸ್ಟೇಬಲ್ ಪೂಜಾ ಹಿರೇಮಠ ಹಲ್ಲೆಗೊಳಗಾದವರು. ತಳ್ಳಾಟದಲ್ಲಿ ಗಾಯಗೊಂಡ ಇಬ್ಬರೂ ಪೊಲೀಸರನ್ನು ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಾತನಾಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಮೇ