ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಜಿಲ್ಲಾ ಸತ್ರ ನ್ಯಾಯಾಲಯ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಕಾಮುಕರಿಗೆ ಕಠಿಣ ಶಿಕ್ಷೆ ಜಾರಿ ಮಾಡಿ ಎಚ್ಚರಿಕೆ ಸಂದೇಶ ರವಾನಿಸಿದೆ. ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಭಾನುಮತಿ ಮಹತ್ವದ ತೀರ್ಪು ನೀಡಿದ್ದು, ಚಿಕ್ಕಬಳ್ಳಾಪುರ ಮೂಲದ ನರಸಿಂಹ ಮೂರ್ತಿಗೆ 12 ವರ್ಷ ಜೈಲು ಹಾಗೂ ಚಿಂತಾಮಣಿ ಮೂಲದ ಕುಮಾರ್ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಸೆಪ್ಟೆಂಬರ್ ಒಂದರಂದು ನರಸಿಂಹ ಮೂರ್ತಿಗೆ ಶಿಕ್ಷೆ