ನಿರೀಕ್ಷೆಯಂತೆ ನೈಋತ್ಯ ಮುಂಗಾರು ರಾಜ್ಯವನ್ನು ಪ್ರವೇಶಿಸಿದ್ದು, ಉತ್ತಮ ಮಳೆಯ ಭರವಸೆ ಮೂಡಿಸಿದೆ. ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗಲಿದ್ದು ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ರಾಜ್ಯಾದ್ಯಂತ ಭಾರೀ ಮಳೆಯಾಗಲಿದ್ದು, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಭಾಗದ ಬೀದರ್, ಕಲಬುರಗಿ,