ಹಳಿ ದಾಟುತ್ತಿದ್ದಾಗ ಕ್ಷಣಾರ್ಧದಲ್ಲಿ ದುರ್ಮರಣಕ್ಕೀಡಾದ ಇಬ್ಬರು ಮಹಿಳೆಯರು

ಮಂಗಳೂರು| Ramya kosira|
ಮಂಗಳೂರು: ರೈಲ್ವೆ ಹಳಿ ದಾಟುತ್ತಿದ್ದಾಗ ಏಕಾಏಕಿ ರೈಲು ಬಂದು ಡಿಕ್ಕಿಹೊಡೆದ ಪರಿಣಾಮ ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಮಾಹಾಕಾಳಿ ಪಡ್ಪು ಎಂಬಲ್ಲಿ ಸಂಭವಿಸಿದೆ.
ಬೀಡಿ ಬ್ರಾಂಚ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರು, ಇಂದು ಮುಂಜಾನೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘೋರ ದುರಂತ ಸಂಭವಿಸಿದೆ.> ರೈಲು ಬರುವುದು ಗೊತ್ತಾಗದೇ ಮಹಿಳೆಯರು ರೈಲ್ವೆ ಹಳಿ ದಾಟಲು ಮುಂದಾಗಿದ್ದಾರೆ. ಕ್ಷಣಾರ್ಧದಲ್ಲಿ ರೈಲು ಬಂದೇಬಿಟ್ಟಿದ್ದು, ಇಬ್ಬರು ಮಹಿಳೆಯರಿಗೆ ಡಿಕ್ಕಿಹೊಡೆದಿದೆ. ನೋಡ ನೋಡುತ್ತಿದ್ದಂತೆಯೇ ಮಹಿಳೆಯರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.>  


ಇದರಲ್ಲಿ ಇನ್ನಷ್ಟು ಓದಿ :