ಶಿವಸೇನೆಯ ಚಿಹ್ನೆಯ ವಿವಾದವು ಇದೀಗ ಸುಪ್ರೀಂಕೋರ್ಟ್ ತಲುಪಿದೆ. ಶಿವಸೇನೆ ವರ್ಸಸ್ ಶಿವಸೇನೆ ನಡುವಿನ ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಬಣಕ್ಕೆ ಗೆಲುವು ಸಿಕ್ಕಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ತೀವ್ರ ಮುಖಭಂಗವಾಗಿದೆ. ಕೇಂದ್ರ ಚುನಾವಣಾ ಆಯೋಗ ಶಿವಸೇನೆಯ ಮೂಲ ಚಿಹ್ನೆಯಾದ ‘ಬಿಲ್ಲು ಬಾಣ’ವನ್ನು ಶಿಂದೆ ಬಣಕ್ಕೆ ನೀಡುವ ಮೂಲಕ ಶಿಂದೆ ಬಣವೇ ನಿಜವಾದ ಶಿವಸೇನೆ ಎಂದು ಘೋಷಿಸಿತ್ತು. ಶಿಂದೆ ಬಣಕ್ಕೆ ಚುನಾವಣಾ ಚಿಹ್ನೆ ‘ಬಿಲ್ಲು-ಬಾಣ’ ನೀಡುವ