ಉಡುಪಿ, ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.ನಿನ್ನೆ ಮಧ್ಯಾಹ್ನ ದಿಂದ ಸುರಿಯುತ್ತಿರುವ ಮಳೆ ಮುಂದುವರಿದಿದ್ದು, ಜನರು ಹೈರಾಣಾಗಿದ್ದಾರೆ.100 ಮಿಲಿಮೀಟರ್ ಸುರಿದ ಮಳೆ ದಾಖಲೆಯತ್ತ ಮುಂದುವರಿದಿದೆ.ಕೆಲವೆಡೆ ನೆಲಕ್ಕುರುಳಿದ ವಿದ್ಯುತ್ ಕಂಬಗಳು ಮತ್ತಷ್ಟು ಸಂಕಷ್ಟ ತಂದೊಡ್ಡಿವೆ.ವಾಯು ಚಂಡಮಾರುತ ಹಿನ್ನಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರದಲ್ಲಿ ಹೆಚ್ಚಿದ ಅಲೆಗಳ ಅಬ್ಬರ ಮಳೆ ಮೇಲೆ ಪರಿಣಾಮ ಬೀರಿದೆ.ಸಮುದ್ರ ತೀರದಲ್ಲಿ ಜನರಿಗೆ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಲಾಗಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.ಇನ್ನು, ಅರಬ್ಬಿ ಸಮುದ್ರದಲ್ಲಿ