ಮುಂಬೈನಿಂದ ಬೆಂಗಳೂರಿಗೆ ಉದ್ಯಾನ್ ಎಕ್ಸ್ ಪ್ರೆಸ್ ಆಗಮನ

ಬೆಂಗಳೂರು| pavithra| Last Modified ಮಂಗಳವಾರ, 2 ಜೂನ್ 2020 (09:41 IST)

ಬೆಂಗಳೂರು : ಮುಂಬೈನಿಂದ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಉದ್ಯಾನ್ ಎಕ್ಸ್ ಪ್ರೆಸ್ ಆಗಮಿಸಿದೆ.


 

ಈ ರೈಲಿನಲ್ಲಿ 1,200 ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದು, ಕೊರೊನಾ ಭೀತಿ ಹಿನ್ನಲೆಯಲ್ಲಿ ಅವರ ಮೇಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
 

ರೈಲಿನಲ್ಲಿ ಬಂದ ಎಲ್ಲ ಪ್ರಯಾಣಿಕರ ತಪಾಸಣೆ ನಡೆಸಲಾಗುತ್ತಿದೆ. ಅವರ ಲಗೇಜ್ ಗಳಿಗೆ ಔಷಧ ಸಿಂಪಡಿಸಲಾಗುತ್ತಿದೆ. ಹಾಗೇ  ಆರೋಗ್ಯ ತಪಾಸಣೆ ಬಳಿಕ ಅವರನ್ನು ಕ್ವಾರಂಟೈನ್ ಕೇಂದ್ರಕ್ಕೆ ಶಿಫ್ಟ್ ಮಾಡಲಾಗುವುದು ಎನ್ನಲಾಗಿದೆ.

 

 
ಇದರಲ್ಲಿ ಇನ್ನಷ್ಟು ಓದಿ :