ಮಂಗಳೂರಿನ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡು ಗಾಯಗೊಂಡಿದ್ದ ಶಂಕಿತ ಉಗ್ರ ಶಾರಿಕ್ ಚೇತರಿಸಿಕೊಂಡಿದ್ದು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಎರಡೂವರೆ ತಿಂಗಳ ಸತತ ಚಿಕಿತ್ಸೆ ಬಳಿಕ ಶಾರಿಕ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾನೆ. ಕುಕ್ಕರ್ ಬಾಂಬ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ಶಾರಿಕ್ನನ್ನು ಮಂಗಳೂರಿನಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 2022ರ ಡಿಸೆಂಬರ್ 17ರಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟ ಗಾಯಗಳ ವಿಭಾಗಕ್ಕೆ ದಾಖಲಿಸಲಾಗಿತ್ತು. ಎನ್ಐಎ ಹಾಗೂ ಸ್ಥಳೀಯ ಪೊಲೀಸರ ಭದ್ರತೆಯಲ್ಲಿ ಚಿಕಿತ್ಸೆ