ಕಾಂಗ್ರೆಸ್ ಅತೃಪ್ತರಲ್ಲಿ ಗುರುತಿಸಿಕೊಂಡಿರುವ ಶಾಸಕ ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಪಕ್ಕಾ ಆದಂತಿದೆ. ಕಾಂಗ್ರೆಸ್ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಈಗಾಗಲೇ ಆಪ್ತರು ಹಾಗೂ ಕ್ಷೇತ್ರದ ಪ್ರಮುಖರು, ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿರುವ ಉಮೇಶ್ ಜಾಧವ್ ರ ಮುಂದಿನ ನಡೆ ಬಗ್ಗೆ ಕುತೂಹಲ ಮೂಡಿಸಿದೆ.ಇಂದು ಇಲ್ಲವೇ ನಾಳೆ ಜಾಧವ್ ರಾಜೀನಾಮೆ ನೀಡುವುದು ಖಚಿತವಾಗಿದೆ. ಕಾಂಗ್ರೆಸ್ನಿಂದ ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಶಾಸಕಾಂಗ ಪಕ್ಷದ ನಾಯಕ