ಬೆಂಗಳೂರು : ಸಂಪುಟ ಸೇರಲು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ್ ಕತ್ತಿ ಭರ್ಜರಿ ಕಸರತ್ತು ನಡೆಸಿದ್ದು, ಈ ಬಾರಿ ಮತ್ತೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ತವರು ಜಿಲ್ಲೆಯಲ್ಲಿ ಕಾರ್ಯಕ್ರಮ ಇದ್ದರೂ ಕೂಡ ಬೆಂಗಳೂರಿಗೆ ತೆರಳಿ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿ ಸಿಎಂ ಜೊತೆ ಸಚಿವ ಸಂಪುಟ ಸೇರುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಉಮೇಶ್ ಕತ್ತಿ