ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನಕ್ಕೆ ಪ್ರತ್ಯುತ್ತರ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸುತ್ತಿದ್ದು, ಆದ್ದರಿಂದ ಬೆಳಗಾವಿಯಲ್ಲಿ ಬಿಜೆಪಿಯ ಮಾಜಿ ಸಚಿವರಾದ ಉಮೇಶ್ ಕತ್ತಿ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಾಂಗ್ರೆಸ್ಗೆ ಸೆಳೆಯುವ ಕಾರ್ಯಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಸೋದರ ರಮೇಶ್ ಜಾರಕಿಹೊಳಿಯನ್ನು ಸಚಿವರನ್ನಾಗಿ ಮಾಡಿದ ದಿನದಿಂದ ಅಸಮಾಧಾನಗೊಂಡಿರುವ ಸತೀಶ ಜಾರಕಿಹೊಳಿ ಸಚಿವ ಸ್ಥಾನ ಕಳೆದುಕೊಂಡ ದಿನದಿಂದ ಸಿಎಂ ವಿರುದ್ಧವೇ ಹೇಳಿಕೆ ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ಮಾಡಿದ್ದಾರೆ.