ಬೆಂಗಳೂರು : ಕರಾವಳಿ ಮೂಲದ ಭೂಗತ ಪಾತಕಿ ರವಿ ಪೂಜಾರಿ ಪಶ್ಚಿಮ ಆಫ್ರಿಕಾದ ಸೆನಗಲ್ ನಿಂದ ಪರಾರಿಯಾಗಿದ್ದಾನೆ ಎಂಬುದಾಗಿ ತಿಳಿದುಬಂದಿದೆ. ನಕಲಿ ಪಾಸ್ಪೋರ್ಟ್ ಆರೋಪದಡಿ ಪಶ್ಚಿಮ ಆಫ್ರಿಕಾದ ಸೆನಗಲ್ನಲ್ಲಿ 4 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ರವಿ ಪೂಜಾರಿ ಅಂತಾರಾಷ್ಟ್ರೀಯ ಕಾನೂನಿನ ಪ್ರಕಾರ ಜಾಮೀನು ಪಡೆದು ಶನಿವಾರ ಜೈಲಿನಿಂದ ಬಿಡುಗಡೆಯಾಗಿ ಸೆನೆಗಲ್ ಬಿಟ್ಟು ಪರಾರಿಯಾಗಿದ್ದಾನೆ ಎಂದು ಸೆನೆಗಲ್ ಪತ್ರಿಕೆಗಳು ವರದಿ ಮಾಡಿವೆ. ಆದರೆ ಹಿರಿಯ ಪೊಲೀಸ್ ಅಧಿಕಾರಿಗಳು ಈ ಕುರಿತು ಮಾಹಿತಿ