ಬೆಂಗಳೂರು : ಪಕ್ಷದಿಂದ ಪಕ್ಷಕ್ಕೆ, ಕ್ಷೇತ್ರದಿಂದ ಕ್ಷೇತ್ರವನ್ನು ಬದಲಿಸುವ ಸಿದ್ದರಾಮಯ್ಯ ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಬಾದಾಮಿಯನ್ನು 2 ನೇ ಕ್ಷೇತ್ರವಾಗಿ ಆಯ್ಕೆ ಮಾಡಿಕೊಂಡು ಸ್ಪರ್ಧಿಸಲು ಪ್ರಯತ್ನಿಸುವ ಮೂಲಕ ವಲಸೆ ಹಕ್ಕಿ ಆಗಿದ್ದಾರೆ. ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಜನರ ಆಕ್ರೋಶದಿಂದ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಎರಡು ಕಡೆ