ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರೆ ಬಗ್ಗೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ಏತನ್ಮಧ್ಯೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.ಧಾರಾಕಾರ ಮಳೆ ಹಾಗೂ ಬಳ್ಳಾರಿ ನಾಲಾ ಪ್ರವಾಹದಿಂದ ತೀವ್ರ ಹಾನಿಗೊಳಗಾಗಿರುವ ಬೆಳಗಾವಿ ನಗರದ ವಿವಿಧ ಪ್ರದೇಶಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ನವದೆಹಲಿಯಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಜಿಲ್ಲೆಯಲ್ಲಿ ಪ್ರವಾಹ ಹಾಗೂ ಮಳೆಯಿಂದ ಉಂಟಾಗಿರುವ ಜೀವಹಾನಿ,