ಇಡೀ ರಾಜ್ಯದ ರಾಜಕಾರಣವನ್ನ ಸದ್ಯ ನಗೆಪಾಟಲಿಗೆ ಈಡಾಗಿಸಿದ್ದಾರೆ. ಏಡಿಗಳನ್ನ ತಟ್ಟೆಯಲ್ಲಿ ಹಾಕಿದ್ರೆ ಪರಸ್ಪರ ಕೈ-ಕಾಲು ಎಳೆಯುವ ರೀತಿಯಲ್ಲಿ ಕಾಂಗ್ರೆಸ್ ಕಚ್ಚಾಟವಿದೆ. ಹೀಗಂತ ಕೇಂದ್ರ ಸಚಿವ ಹರಿಹಾಯ್ದಿದ್ದಾರೆ.ಮಂಗಳೂರಿನಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿಕೆ ನೀಡಿದ್ದು, ಕರ್ನಾಟಕದ ರಾಜಕಾರಣವನ್ನ ಹೇಸಿಗೆಯ ತಾಣವಾಗಿ ಪರಿವರ್ತನೆ ಮಾಡಿದ್ದಾರೆ. ಕುಮಾರಸ್ವಾಮಿ ಸಿಎಂ ಆಗಿ ಕೆಲಸ ಮಾಡಲಾಗ್ತಿಲ್ಲ. ಸಿದ್ದರಾಮಯ್ಯ ಕೆಲಸ ಮಾಡಲು ಬಿಡ್ತಿಲ್ಲ. ಈ ಎಲ್ಲಾ ನಾಟಕದ ಹಿಂದೆ ಸಿದ್ದರಾಮಯ್ಯರ ಪೂರ್ತಿ ಕೈವಾಡವಿದೆ. ಸಿದ್ದರಾಮಯ್ಯರೇ ತನ್ನ ಹಿಂಬಾಲಕರನ್ನ