ಸರ್ಕಾರದ ಶೇಕಡಾ 17ರಷ್ಟು ವೇತನ ಹೆಚ್ಚಳ ಆದೇಶವನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಸ್ವಾಗತಿಸಿದ್ದು, ಈ ಮೂಲಕ ಮುಷ್ಕರವನ್ನು ವಾಪಸ್ ಪಡೆದುಕೊಂಡಿದೆ. 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ಇಂದು ಮುಷ್ಕರ ನಡೆಸಿದ್ದರು. ಇದರಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಿದ್ದು ಭಾರೀ ಸಮಸ್ಯೆಗಳು ಎದುರಾಗಿದ್ದವು. ಸದ್ಯ ಈ ಬಗ್ಗೆ ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ನೌಕರರ ಶೇ.17ರಷ್ಟು