ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಕನ್ನಡವನ್ನು ಕಡೆಗಣಿಸಿ ಇಂಗ್ಲೀಷಿಗೆ ಮಣೆಹಾಕಿದ ಕೇಂದ್ರ ರೈಲು ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ.ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ತೀವ್ರ ಪ್ರತಿಭಟನೆ ನಡೆಸಿ ಸಂಸದ ಸುರೇಶ್ ಅಂಗಡಿಯವರ ಪ್ರತಿಕೃತಿಯನ್ನು ದಹಿಸಿದರು.ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಧರಣಿ ನಡೆಸಿದ ಕರವೇ ಕಾರ್ಯಕರ್ತರು, ಅಂಗಡಿಯವರ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೇ ಪ್ರತಿಕೃತಿಯನ್ನು ದಹಿಸಿದರು.ಕರವೇ ಜಿಲ್ಲಾಧ್ಯಕ್ಷ ಮಹಾದೇವ ತಳವಾರ, ಯುವ ಘಟಕದ ಅಧ್ಯಕ್ಷ ದೀಪಕ