ಬೆಂಗಳೂರು : ಗ್ಯಾರೇಜ್ ನಲ್ಲಿ ನಿಲ್ಲಿಸಿದ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ನೆಲಮಂಗಲ ಟೌನ್ ನ ಕುಣಿಗಲ್ ವೃತ್ತದಲ್ಲಿರುವ ಗ್ಯಾರೇಜ್ ನಲ್ಲಿರುವ ಕಾರಿನಲ್ಲಿ ವ್ಯಕ್ತಿ ಶವ ಪತ್ತೆಯಾಗಿದೆ. ಕೊರೆಯುವ ಚಳಿಗೆ ಕಾರಿನಲ್ಲಿ ಕುಳಿತಾಗ ವ್ಯಕ್ತಿ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಆದರೆ ಆತ ಯಾರೆಂಬ ಮಾಹಿತಿ ಇನ್ನು ತಿಳಿದುಬಂದಿಲ್ಲ.. ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,