ಮಂಗಳೂರು ಚಲೋ ಬೈಕ್ ರ್ಯಾಲಿಗೆ ಸರಕಾರ ತಡೆಯೊಡ್ಡಿರುವುದನ್ನು ಕೇಂದ್ರ ಸಚಿವ ಅನಂತ್ ಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ನಿರ್ಮಾಣವಾಗಿದೆ. ಸರಕಾರ ಎಷ್ಟೇ ನಿರ್ಭಂಧ ಹೇರಿದರೂ ಯಾವುದೇ ಕಾರಣಕ್ಕೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದ್ದಾರೆ. ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಬಿಜೆಪಿ ಮತ್ತು ಹಿಂದು ಪರ ನಾಯಕರ ಹತ್ಯೆ ಖಂಡಿಸಿ ಹೋರಾಟ ಮುಂದುವರಿಯಲಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ