ಸಕ್ಕರೆ ನಾಡು ಮಂಡ್ಯದಲ್ಲಿ ಬಿಜೆಪಿ ಪಕ್ಷವನ್ನ ಬಲಗೊಳಿಸಲು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ ಧುರೀಣ ಎಸ್.ಎಂ.ಕೃಷ್ಣ ಅಖಾಡಕ್ಕೆ ಇಳಿದಿದ್ದಾರೆ. ಇದೇ ಸಂದರ್ಭದಲ್ಲಿ ಎರಡನೇ ಅವಧಿಯಲ್ಲಿ ಯುಪಿಎ ಸರ್ಕಾರದ ಭ್ರಷ್ಟಾಚಾರದ ಆರೋಪ ಹಾಗೂ ಸರ್ಕಾರದ ಮೇಲೆ ರಾಹುಲ್ ಗಾಂಧಿ ಹಸ್ತಕ್ಷೇಪದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.ಲೋಕಸಭಾ ಚುನಾವಣೆಯ ದೃಷ್ಟಿಯಿಂದ ತಮ್ಮ ತವರು ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನ ಸಂಘಟಿಸಲು ಮಂಡ್ಯ ನಗರದ ಬಿಜಿಎಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ