ಬೆಂಗಳೂರು : ಕಾಂಗ್ರೆಸ್ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನಡುವೆ ಮೇಲ್ಮನೆ ಟಿಕೆಟ್ ಫೈಟ್ ಆರಂಭವಾಗಿದೆ.ಈ ನಡುವೆ ಅಭ್ಯರ್ಥಿಗಳ ಆಯ್ಕೆಯ ಕುರಿತಾದ ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಟಿಕೇಟ್ಗೆ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಇದ್ದರು. ಅವೆಲ್ಲ ಹೆಸರು ನಾವು ಕಳುಹಿಸಿದ್ದೇವೆ. ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳುತ್ತದೆ.ನಾವು ಶಿಫಾರಸ್ಸು ಮಾಡಿದ್ದನ್ನು ಹೈಕಮಾಂಡ್