ಮಂಗಳೂರು : ಬಿಜೆಪಿಯ ಭದ್ರಕೋಟೆಯಾದ ದಕ್ಷಿಣ ಕನ್ನಡದಲ್ಲಿ ಯು.ಟಿ ಖಾದರ್ ಅಪರೇಷನ್ ಹಸ್ತ ನಡೆಸಿ ಯಶಸ್ವಿಯಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಹೌದು. ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಮುನಿಸಿಕೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ರಂಜನ್ ಗೌಡನನ್ನು ಕಾಂಗ್ರೆಸ್ ನಾಯಕ ಯು.ಟಿ ಖಾದರ್ ಕಾಂಗ್ರೆಸ್ ನತ್ತ ಸೆಳೆದಿದ್ದು, ನಿನ್ನೆ ರಾತ್ರಿ ಸಿದ್ಧರಾಮಯ್ಯ ರನ್ನು ಭೇಟಿ ಮಾಡಿಸಿ ಮಾತುಕತೆ ನಡೆಸಿದ್ದಾರೆ. ಇಂದು ರಂಜನ್ ಗೌಡ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.