ಹಾಸನ : ‘ಶಾಲೆ, ಕಾಲೇಜು ಹಾಗೂ ಹಾಸ್ಟೆಲ್’ಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬರುತ್ತಿದ್ದು, ಸರ್ಕಾರ ಕೂಡಲೇ ಶಾಲಾ-ಕಾಲೇಜುಗಳಿಗೆ ಕೊನೆಪಕ್ಷ 15 ರಿಂದ 20 ದಿನ ರಜೆ ಘೋಷಣೆ ಮಾಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ.ಚನ್ನಪಟ್ಟಣದ ಹೊಂಗನೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಸತಿ ಶಾಲೆಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಸೋಂಕಿತರಾಗಿದ್ದಾರೆ. ಹೀಗಾಗಿ ಇಂಥ ಶಾಲೆಗಳನ್ನು ತಕ್ಷಣವೇ ಬಂದ್ ಮಾಡಿಸಬೇಕು ಎಂದರು. ತಜ್ಞರಲ್ಲಿ