ಬೆಂಗಳೂರು : ಗೊಟ್ಟಿಗೆರೆ ಬ್ಲಾಕ್ ಕಾಂಗ್ರೆಸ್ ಹಾಗೂ ನಾರಾಯಣ ಹೆಲ್ತ್ ಸಹಯೋಗದಲ್ಲಿ ನಿರಾಶ್ರಿತರು, ಸ್ವಚ್ಛತಾ ಕಾರ್ಮಿಕರು, ಕೂಲಿ ಕಾರ್ಮಿಕರು ಸೇರಿದಂತೆ ಮೂರು ಸಾವಿರ ಮಂದಿಗೆ ಕೋವಿಡ್ ಲಸಿಕೆ ಹಾಕುವ ಅಭಿಯಾನವನ್ನು ಜಂಬೂಸವಾರಿ ದಿಣ್ಣೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಕೃಷ್ಣಪ್ಪ, ಬಿಜೆಪಿಗರು ಕೋವಿಡ್ಗೆ ಹೆದರಿ ಮನೆಯಲ್ಲಿ ಅಡಗಿ ಕೂತಿದ್ದರು. ಅಂತಹ ಸಂದರ್ಭದಲ್ಲೂ ಆರ್.ಕೆ.ರಮೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಲಸಿಕೆ ಅಭಿಯಾನದ