ಬೆಂಗಳೂರು : ಕೇಂದ್ರ ಸರಕಾರದ ನಿರ್ದೇಶನದಂತೆ ನಗರದಲ್ಲಿನ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜ. 3ರಿಂದ ಕೋವಿಡ್ ಲಸಿಕೆ ನೀಡಲು ಬಿಬಿಎಂಪಿ ಅಗತ್ಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.ಪಾಲಿಕೆ ವ್ಯಾಪ್ತಿಯಲ್ಲಿ ಈ ವಯಸ್ಸಿನ 5 ಲಕ್ಷ ಮಕ್ಕಳಿದ್ದಾರೆ.ನಗರದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಮಂಗಳವಾರ ಅಧಿಕಾರಿಗಳೊಂದಿಗೆ ವರ್ಚುವಲ್ ಮೂಲಕ ನಡೆಸಿದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮುಖ್ಯ ಆಯುಕ್ತ ಗೌರವ್ ಗುಪ್ತ, 15-18 ವರ್ಷದೊಳಗಿನ ಮಕ್ಕಳಿಗೆ ಜ. 3ರಿಂದ ಲಸಿಕೆ ನೀಡಲು ಆಯಾ