ಜಮ್ಮುವಿನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳ ಮೇಲಿರುವ ವೈಷ್ಣೋದೇವಿ ದೇವಸ್ಥಾನಕ್ಕೆ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.