ಬೆಂಗಳೂರು : ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಉತ್ತರಾಧಿಕಾರಿಯಾಗಿದ್ದಾರೆ.ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು