ಸತತ ಬರಗಾಲಕ್ಕೆ ತುತ್ತಾಗಿದ್ದ ಜಿಲ್ಲೆಯಲ್ಲಿ ಸುರಿಯುತ್ತಿರೋ ಮಳೆಗೆ ಕೆರೆ ಕೋಡಿ ಬಿದ್ದದ್ದು, ಜನರ ಹರ್ಷಕ್ಕೆ ಕಾರಣವಾಗಿದೆ.ಚಿತ್ರದುರ್ಗ ಜಿಲ್ಲೆಯಲ್ಲಿ ಈಗ ಮಳೆ ಆರ್ಭಟಿಸುತ್ತಿದೆ. ಜಿಲ್ಲೆಯ ಏಕೈಕ ಜಲಾಶಯ ವಾಣಿವಿಲಾಸ. ಈ ಜಲಾಶಯಕ್ಕೆ 5 ಅಡಿ ನೀರು ಹರಿದು ಬಂದಿದ್ದು, ಇಂದಿಗೆ ಜಲಾಶಯದ ನೀರಿನ ಮಟ್ಟ 66.7 ಅಡಿಯಷ್ಟಿದೆ.ಹಿರಿಯೂರು ತಾಲೂಕಿನ ಹಲವೆಡೆ ಮಳೆಯಾಗಿದ್ದು, ರಾತ್ರಿ ಸುರಿದ ಮಳೆಗೆ ತಾಲೂಕಿನ ಗೌಡನಹಳ್ಳಿ ಕೆರೆ ಇಪ್ಪತ್ತು ವರ್ಷಗಳ ನಂತರ ಕೋಡಿ ಬಿದ್ದಿದೆ.ಗೌಡನಹಳ್ಳಿ, ರಂಗಾಪುರ, ಕೆರೆಕೋಡಿಹಟ್ಟಿ ಗ್ರಾಮಸ್ಥರು