Karnataka Rains Today:(ಆ.22): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಮೂರು ದಿನಗಳಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಆಗಸ್ಟ್ 24ರವರೆಗೂ ಕರ್ನಾಟಕದಲ್ಲಿ ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 9 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.