ಬೆಂಗಳೂರು : ಕನ್ನಡ ಪರ ಸಂಘಟನೆಯ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಮಹದಾಯಿ ಸಮಸ್ಯೆಯನ್ನು ಪ್ರಧಾನಿ ನರೇಂದ್ರ ಮೋದಿ ಬಗೆ ಹರಿಸುವ ಭರವಸೆಯನ್ನು ನೀಡದೇ ಇದ್ದರೆ ಫೆ.4 ರಂದು ಬೆಂಗಳೂರು ಬಂದ್ ನಡೆಸಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಜನವರಿ 25ರಂದು ಸ್ವಯಂ ಪ್ರೇರಿತವಾಗಿ ಕರ್ನಾಟಕ ಬಂದ್ ನಡೆಸಿದ್ದೇವೆ. ಇದಕ್ಕೆ ಯಾವ ಸರ್ಕಾರ ಕೂಡ ಬೆಂಬಲ ನೀಡಿರಲಿಲ್ಲ. ಆದರೆ ಬಿಜೆಪಿ ನಾಯಕರು ನಮ್ಮ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ.