ಬೆಂಗಳೂರು: 2018 ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. 15 ಜಿಲ್ಲೆಗಳ ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಿ ಮತ್ತು 94 ಜನರನ್ನೊಳಗೊಂಡ ಕಾರ್ಯಕಾರಿ ಸಮಿತಿ ರಚಿಸಿ ಎಐಸಿಸಿ ಆದೇಶ ಹೊರಡಿಸಿದೆ. ಇದರ ನಡುವೆ ನೂತನ ಚುನಾವಣಾ ಪ್ರಣಾಳಿಕೆ ಸಮಿತಿ ರಚಿಸಿದೆ. ಇದರ ನೇತೃತ್ವವನ್ನು ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿಗೆ ವಹಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎಸ್.ಆರ್.ಪಾಟೀಲ್, ದಿನೇಶ್ ಗುಂಡೂರಾವ್, ಸಚಿವರಾದ ರಾಮಲಿಂಗಾರೆಡ್ಡಿ, ಕಾಗೋಡು ತಿಮ್ಮಪ್ಪ, ಎಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್, ಡಾ. ಎಚ್.ಸಿ ಮಹದೇವಪ್ಪ, ಕೆ.ಜೆ. ಜಾರ್ಜ್, ಯು.ಟಿ.