ರಸ್ತೆ ಬದಿಯಲ್ಲಿ ಮಲಗಿದ್ದ ಏಳು ವರ್ಷದ ಬಾಲಕಿ ಮೇಲೆ ಬೊಲೆರೋ ವಾಹನ ಹರಿದು ಮೃತಪಟ್ಟಿರುವ ದಾರುಣ ಘಟನೆ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಿಟಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಮುಂಜಾನೆ ನಾಲ್ಕು ಗಂಟೆಗೆ ಈ ದುರ್ಘಟನೆ ನಡೆದಿದ್ದು, ತಮಿಳುನಾಡು ಮೂಲದ ಶಿವನ್ಯ ಮೃತ ದುರ್ದೈವಿಯಾಗಿದ್ದಾಳೆ. ಮೃತ ಮಗು, ಆಕೆಯ ತಾಯಿ ಇಬ್ಬರೂ ಅಲಂಕಾರಿಕ ವಸ್ತುಗಳನ್ನು ಮಾರಾಟ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮೂರ್ನಾಲ್ಕು ದಿನಗಳ ಹಿಂದೆ ಹುಸ್ಕೂರು ಜಾತ್ರೆಗೆ