ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರುಹಾಜರಾಗಿದ್ದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾವು ಮುಂದಿನ ವಿಧಾನಸಭೆ ಚುನಾವಣೆಯ ಬಗ್ಗೆ ತಲೆಕೆಡಿಸಿಕೊಂಡಿದ್ದೇವೆ. ನೀವು ಸಚಿವರ ಪ್ರತಿಜ್ಞಾವಿಧಿ ಸಮಾರಂಭಕ್ಕೆ ಗೈರುಹಾಜರಾಗಿದ್ದೀರಿ ಎಂದು ಖಾರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಜೆ..ಸಿ. ಚಂದ್ರಶೇಖರ್ ಪರ ನೀವ್ಯಾಕೆ ಯಾಕೆ ತಲೆಕೆಡಿಸಿಕೊಂಡಿದ್ದೀರಾ? ಅವರು ಎಷ್ಟು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರವಾಗಿ ಮತಯಾಚಿಸಿದ್ದಾರೆ.