ಮಹಾದಾಯಿ ವಿಚಾರದಲ್ಲಿ ಬಿಜೆಪಿ ಮುಖಂಡರು ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಅವಕಾಶ ನೀಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಕಾಂಗ್ರೆಸ್ ಪಕ್ಷದ ಉಸ್ತುವಾರಿ ವೇಣುಗೋಪಾಲ್ ಅವರು ಕೆಪಿಸಿಸಿಯಿಂದ ವರದಿ ಕೇಳಿದ್ದಾರೆ. ಬಿಜೆಪಿಯವರು ಕೆಪಿಸಿಸಿ ಕಚೇರಿ ಹತ್ತಿರ ಪ್ರತಿಭಟನೆ ನಡೆಸಿದ್ದಕ್ಕೆ ಗೃಹ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಿರುದ್ಧ ಗರಂ ಆಗಿರುವ ವೇಣುಗೋಪಾಲ ಅವರು, ಗಂಟೆಗಟ್ಟಲೆ ಭಾಷಣ ಮಾಡಲಿಕ್ಕೆ ಅವಕಾಶ ಮಾಡಿಕೊಟ್ಟಿದ್ದು ಸರಿಯೇ, ಪ್ರತಿಭಟನೆ ತಾರಕ್ಕೇರಿ