1727 ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಗೆ ರಾಜ್ಯ ಸಚಿವ ಸಂಪುಟ ಬುಧವಾರ ಅಸ್ತು ಎಂದಿದೆ. ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (ಎನ್ಸಿಟಿಇ) ನಿಯಮಾವಳಿಗಳ ಅಡಿಯಲ್ಲಿ ಈ ಭರ್ತಿ ನಡೆಯಲಿದೆ. ಈ ಹಿಂದೆ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದಾಗ ಎನ್ಸಿಟಿಇ ನಿಯಮ ಪಾಲಿಸಿಲ್ಲ ಎಂದು ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿತ್ತು. ಹೀಗಾಗಿ ಎನ್ಸಿಟಿಇ ನಿಯಮಗಳ ಪ್ರಕಾರ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ