ರಾಜ್ಯದ ಏಕೈಕ ಕರ್ನಾಟಕ ಪಶು ವೈದ್ಯಕೀಯ,ಪಶು ಹಾಗೂ ಮೀನುಗಾರಿಕೆ ವಿಜ್ಱನಿಗಳ ವಿಶ್ವವಿದ್ಯಾನಿಲಯದಲ್ಲಿ ಇದೇ ತಿಂಗಳ 31ರ ಬೆಳಿಗ್ಗೆ 11ಗಂಟೆಗೆ ಘಟಿಕೋತ್ಸವ ನಡೆಯಲಿದೆ.ಬೀದರ್ ನಗರದ ಹೊರವಲಯದ ನಂದಿ ನಗರದಲ್ಲಿರುವ ವಿವಿಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯಾ ನಾಯ್ಡು ಮುಖ್ಯ ಅತಿಥಿಗಳಾಗಿ,ರಾಜ್ಯಪಾಲ ವಾಜುಭಾಯಿ ರುಡಾಭಾಯಿ ವಾಲಾ, ಪಶು ಸಂಗೋಪನಾ ಸಚಿವ ವೆಂಕಟರಾವ ನಾಡಗೌಡ, ಸಚಿವ ಬಂಡೆಪ್ಪಾ ಕಾಶಂಪೂರ್ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಅಂದು ನಡೆಯುವ ಘಟಿಕೋತ್ಸವದಲ್ಲಿ 447 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ. ಅದರಲ್ಲಿ 309 ಸ್ನಾತಕ