Widgets Magazine

ಹುಟ್ಟು ಹಬ್ಬ ಆಚರಿಸುತ್ತಿದ್ದ ಬಿಜೆಪಿ ಮುಖಂಡನನ್ನು ಕೊಲೆ ಮಾಡಿದ ದುಷ್ಕರ್ಮಿಗಳು

ಮೈಸೂರು| pavithra| Last Modified ಶುಕ್ರವಾರ, 6 ಮಾರ್ಚ್ 2020 (10:22 IST)
ಮೈಸೂರು : ಹುಟ್ಟು ಹಬ್ಬ ಆಚರಿಸುತ್ತಿದ್ದ ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ದುಷ್ಕರ್ಮಿಗಳು ಆತನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಮೈಸೂರಿನಲ್ಲಿ ತಡರಾತ್ರಿ ನಡೆದಿದೆ.


ಎಸ್. ಆನಂದ್ ಕೊಲೆಯಾದ ಬಿಜೆಪಿ ಮುಖಂಡ. ಈತ ನಿನ್ನೆ ತನ್ನ ಹುಟ್ಟು ಹಬ್ಬವಿದ್ದ ಹಿನ್ನಲೆಯಲ್ಲಿ ಮನೆಯಲ್ಲಿ ಗೆಳೇಯರ ಜೊತೆ ಆಚರಣೆ ಮಾಡುತ್ತಿದ್ದ. ಆ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿಗಳು  ಆತನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.


ಈ ಬಗ್ಗೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆಯಾದ ಆನಂದ  ರಿಯಲ್ ಎಸ್ಟೇಟ್ ಹಾಗೂ ಫೈನಾನ್ಸ್  ವ್ಯವಹಾರ ನಡೆಸುತ್ತಿದ್ದ ಅಲ್ಲದೇ ಆತ 13 ವರ್ಷಗಳ ಹಿಂದೆ ಕೊಲೆ ಪ್ರಕರಣದ ಆರೋಪಿಯಾಗಿದ್ದ ಎನ್ನಲಾಗಿದೆ.   ಇದರಲ್ಲಿ ಇನ್ನಷ್ಟು ಓದಿ :