ಗಾಂಜಾಕ್ಕೆ ಹಣ ಕೊಡದ ಬಾಲಕನನ್ನು ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು

ಬೆಂಗಳೂರು| pavithra| Last Modified ಗುರುವಾರ, 7 ನವೆಂಬರ್ 2019 (09:25 IST)
ಬೆಂಗಳೂರು : ಗಾಂಜಾಗೆ  50ರೂ ಕೊಡದ ಬಾಲಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಡಿಜೆ ಹಳ್ಳಿಯ ಮೋದಿ ರಸ್ತೆ ಬಳಿ ನಡೆದಿದೆ.
> > ಮಹಮ್ಮದ್ ವಾಸಿಂ(16) ಕೊಲೆಯಾದ ಬಾಲಕ. ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬಾಲಕ ಕೆಲಸ ಮುಗಿಸಿ ಮನೆ ಹೋಗುವಾಗ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ವಾಸಿಂನನ್ನು ಅಡ್ಡಗಟ್ಟಿ ಗಾಂಜಾಗೆ 50ರೂ ಕೊಡುವಂತೆ ಕೇಳಿದ್ದಾರೆ. ಆಗ ಹಣವಿಲ್ಲ ಎಂದಿದ್ದಕ್ಕೆ ಚಾಕುವಿನಿಂದ ಆತನ ಎದೆಗೆ ಇರಿದು ಪರಾರಿಯಾಗಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಇದರಲ್ಲಿ ಇನ್ನಷ್ಟು ಓದಿ :