ಕೊರೋನಾ ಸೋಂಕಿನಿಂದ ವ್ಯಕ್ತಿಯೋರ್ವ ಮೃತರಾದರಿಂದ ಕಲಬುರಗಿಯಲ್ಲಿ ಕೊರೋನಾ ಭೀತಿ ಹೆಚ್ಚಿದ್ದು, ಮುಂಜಾಗ್ರತ ಕ್ರಮವಾಗಿ ಕಲಬುರಗಿ ಜಿಲ್ಲೆಯ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಹೀಗಂತ ಉಪ ಮುಖ್ಯಮಂತ್ರಿ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.ಕಲಬುರಗಿ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಜಿಲ್ಲೆಯ ಕೊರೋನಾ ಪರಿಸ್ಥಿತಿ ಅವಲೋಕಿಸಿ ಮಾತನಾಡಿದರು.ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಾದ ಶ್ರೀ ದತ್ತನ ಕ್ಷೇತ್ರ ದೇವಲ ಗಾಣಗಾಪುರಕ್ಕೆ ಮಹಾರಾಷ್ಟ್ರ