ಶೌಚಾಲಯಕ್ಕೆ ಹೋಗುವ ಮಹಿಳೆಯರೇ ಟಾರ್ಗೆಟ್: ವಿಡಿಯೋ ಮಾಡುತ್ತಿದ್ದ ಕಾಮುಕ ಅರೆಸ್ಟ್

ಬೆಂಗಳೂರು| Rajesh patil| Last Updated: ಸೋಮವಾರ, 5 ಜೂನ್ 2017 (16:48 IST)
ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪೆನಿಯೊಂದರ ಮಹಿಳೆಯರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿ ರಹಸ್ಯವಾಗಿ ಚಿತ್ರಿಕರಿಸುತ್ತಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಮೂಲದ ಕಾಮುಕ 24 ವರ್ಷ ವಯಸ್ಸಿನ ಪರಮೇಶ್ ಅದೇ ಕಂಪೆನಿಯ ಫುಡ್‌ಕೋರ್ಟ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ. ಶೌಚಾಲಯಕ್ಕೆ ತೆರಳಿದ್ದ ಮಹಿಳಾ ಟೆಕ್ಕಿಯೊಬ್ಬರ ವಿಡಿಯೋ ಚಿತ್ರೀಕರಿಸುತ್ತಿರುವ ಸಂದರ್ಭದಲ್ಲಿ ಸಿಕ್ಕು ಬಿದ್ದಿದ್ದಾನೆ.
ಆರೋಪಿ ಕಾಮುಕ ಪರಮೇಶ್ ವಿರುದ್ಧ ಸಾಫ್ಟ್‌ವೇರ್ ಕಂಪೆನಿಯ ಮಹಿಳಾ ಟೆಕ್ಕಿ ಎಚ್‌ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿ ಪರಮೇಶ್‌ನನ್ನು ತಾವು ರೆಡ್‌ಹ್ಯಾಂಡಾಗಿ ಹಿಡಿದಿದ್ದೇನೆ ಎಂದು ದೂರಿನಲ್ಲಿ ದಾಖಲಿಸಿದ್ದರು.

ದೂರಿನ ಅನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ನೂರಾರು ಮಹಿಳೆಯರ ವಿಡಿಯೋ ತೆಗೆದಿರಬಹುದು ಎನ್ನುವ ಶಂಕೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವೆಬ್

ದುನಿಯಾ

ಫ್ಯಾಂಟಸಿ
ಕ್ರಿಕೆಟ್
ಬಹುಮಾನ
ಲೀಗ್`ನಲ್ಲಿಭಾಗವಹಿಸಲು
ಮಾಡಿ..

//kannada.
fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


ಇದರಲ್ಲಿ ಇನ್ನಷ್ಟು ಓದಿ :