ಯುವಕನೊಬ್ಬ ಯುವತಿಯನ್ನು ಪುಸಲಾಯಿಸಿ ಕರೆದುಕೊಂಡು ಬಂದು ನಡೆಸಿದ ಕಾಮದಾಟದ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಘಟನೆ ನಡೆದಿದೆ. ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಯುವತಿಯೊಬ್ಬಳನ್ನು ಕರೆದುಕೊಂಡು ಬಂದಿದ್ದ ಸುನೀಲ್ ಎಂಬಾತ ಆಕೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದನು. ಈ ಸಂದರ್ಭದಲ್ಲಿ ಕಾಮದಾಟವನ್ನು ವಿಡಿಯೋ ಮಾಡಿಕೊಂಡಿದ್ದನು. ಆ ಬಳಿಕ ವಿಡಿಯೋವನ್ನು ವೈರಲ್ ಮಾಡೋದಾಗಿ ಹೆದರಿಸಿ ಆಗಾಗ್ಗೆ ಯುವತಿಯನ್ನು ಕರೆದು ಅತ್ಯಾಚಾರ ಎಸಗಿದ್ದಾನೆ. ಕೊನೆಗೆ ಯುವಕನ ಕಾಟದಿಂದ ಬೇಸತ್ತ ಯುವತಿ ಸಂಘಟನೆಯೊಂದರ ಮೊರೆಹೋಗಿದ್ದಾಳೆ.