ರಸ್ತೆ ಗುಂಡಿಗಳಿಗೆ ವಾಹನ ಸವಾರರು ಬಲಿಯಾಗುತ್ತಿರುವ ಪ್ರಕರಣಗಳು ಏರಿಕೆಯಾಗುತ್ತಿದ್ದರೂ ಈ ಕುರಿತು ನಿರ್ಲಕ್ಷ್ಯ ವಹಿಸಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಾರ್ಟಿಯು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಶನಿವಾರದಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಕುರಿತು ಮಾಹಿತಿ ನೀಡಿದ ಎಎಪಿ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ, ಇತ್ತೀಚಿನ ದಿನಗಳಲ್ಲಿ ರಸ್ತೆಗುಂಡಿಗಳಿಂದಾಗಿ ಅಪಘಾತಗಳು, ಗಾಯಗಳು, ಸಾವುಗಳು ಸಾಮಾನ್ಯವಾಗಿವೆ. ಸರ್ಕಾರದ ನಿರ್ಲಕ್ಷ್ಯ ಹಾಗೂ ಭ್ರಷ್ಟಾಚಾರದಿಂದಾಗಿ ಅಮಾಯಕ ವಾಹನ ಸವಾರರು ತೀವ್ರ ತೊಂದರೆ