ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ನಿಂದ ಹಲ್ಲೆಗೊಳಗಾಗಿ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ವಿದ್ವತ್ ನಿನ್ನೆ ಮಧ್ಯರಾತ್ರಿ ಡಿಸ್ಚಾರ್ಜ್ ಆಗಿ ತೆರಳಿದ್ದಾರೆ.ವಿದ್ವತ್ ಚೇತರಿಸಿಕೊಂಡಿದ್ದು ಡಿಸ್ಚಾರ್ಜ್ ಆಗಬಹುದು ಎಂದು ಘೋಷಿಸಿದ್ದರೂ ಡಿಸ್ಚಾರ್ಜ್ ಆಗದೇ ಆಸ್ಪತ್ರೆಯಲ್ಲಿ ಉಳಿದುಕೊಂಡಿದ್ದರ ಬಗ್ಗೆ ತೀವ್ರ ಚರ್ಚೆಯಾಗಿತ್ತು. ಇದೀಗ ನಿನ್ನೆ ಮಧ್ಯರಾತ್ರಿ ಇದ್ದಕ್ಕಿದ್ದ ಹಾಗೆ ವಿದ್ವತ್ ಮಲ್ಯ ಆಸ್ಪತ್ರೆಯಿಂದ ಬಿಡುಗಡೆಯಾಗಿ ತೆರಳಿದ್ದಾರೆ.ಕಳೆದ 15 ದಿನಗಳಿಂದ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ