ಪ್ರಕೃತಿ ಸೌಂದರ್ಯದ ನೆಲೆ ಬೀಡಾಗಿದ್ದ ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ಮುನಿಸಿಕೊಂಡ ಪರಿಣಾಮ ಜಲ ಪ್ರಳಯವೇ ಉಂಟಾಗಿತ್ತು. ಇದರಿಂದ ಸಾಕಷ್ಟು ಆಸ್ತಿ ಪಾಸ್ತಿ ನಷ್ಟ ಉಂಟಾಗಿ ರಸ್ತೆ ಸಂಪರ್ಕಗಳು ಸಂಪರ್ಕ ಕಡಿತಗೊಂಡಿದ್ದವು. ಮುನ್ನೆಚ್ಚರಿಕೆ ಕ್ರಮವಾಗಿ ಒಂದು ತಿಂಗಳ ಕಾಲ ಜಿಲ್ಲಾಡಳಿತ ಪ್ರವಾಸಿಗರಿಗೆ ನಿರ್ಬಂಧ ಹೇರಿತ್ತು. ಅಧಿಕಾರಿಗಳ ಶ್ರಮದಿಂದ ತಾತ್ಕಾಲಿಕ ಸಂಪರ್ಕಗಳ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಪ್ರವಾಸಿಗರಿಗೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.