ವಿಜಯಪುರ: ದಲಿತ ಬಾಲಕಿ ದಾನಮ್ಮ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆಯನ್ನು ಪ್ರತಿಭಟಿಸಿ ಇಂದು ವಿವಿಧ ಸಂಘಟನೆಗಳು ವಿಜಯಪುರ ಬಂದ್ ಗೆ ಕರೆ ನೀಡಿದ್ದು, ಬಿಜೆಪಿ ಕೂಡಾ ಬೆಂಬಲ ವ್ಯಕ್ತಪಡಿಸಿದೆ. ಇಂದು ವಿಜಯಪುರದಲ್ಲಿ ಬಂದ್ ಆಚರಿಸಲಾಗುತ್ತಿದ್ದು, ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.ವಿಜಯಪುರ ಸಂಪೂರ್ಣ ಬಂದ್ ವಾತಾವರಣವಿದ್ದು, ಬಸ್ ಸಂಚಾರ ಸ್ಥಗಿತಗೊಂಡಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.