ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು ಪ್ರಧಾನ ಸೇವಕನೆಂಬ ಭಾವನೆಯೊಂದಿಗೆ ದೇಶವನ್ನು ಮುನ್ನಡೆಸುತ್ತಿದ್ದಾರೆ. ಭಾರತವು 2047ನೇ ಇಸವಿಗೆ ಅಭಿವೃದ್ಧಿ ಹೊಂದಿದ ದೇಶವಾಗಿ ಪರಿವರ್ತನೆ ಹೊಂದಲು ಪುರುಷರ ಜೊತೆಜೊತೆಯಲ್ಲಿ ಮಹಿಳೆಯರ ಪಾತ್ರವೂ ಬಹಳ ಮಹತ್ವವನ್ನು ಹೊಂದಿದೆ ಎಂಬ ನಂಬಿಕೆ ಮೋದಿಜೀ ಅವರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.ಬೆಂಗಳೂರು ಮಹಾನಗರ ಮಹಿಳಾ ಮೋರ್ಚಾ ವತಿಯಿಂದ ಮಲ್ಲೇಶ್ವರದ ಹವ್ಯಕ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.